ಬೆಳಗಾವಿಯ ಬಿಜೆಪಿ ಗ್ರಾಮಾಂತರ ಜಿಲ್ಲಾ ಕಾರ್ಯಾಲಯದಲ್ಲಿ ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರ್ಕಾರದ 11ನೇ ವರ್ಷದ ವರ್ಷಾಚರಣೆ ಅಂಗವಾಗಿ ನಡೆದ ವಿಶೇಷ ಜಿಲ್ಲಾ ಕಾರ್ಯಾಗಾರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಹಾಗೂ ಮಾಜಿ ಶಾಸಕರು, ಅಭಿಯಾನದ ರಾಜ್ಯ ಸಹ ಸಂಚಾಲಕರಾದ ಸಂಜಯ್ ಪಾಟೀಲ್ ಅವರು ಮಾತನಾಡಿ ಪ್ರಧಾನಿ ನರೇಂದ್ರ ಮೋದಿಜಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಹಾಗೂ ಹಾಗೂ ಅನೇಕ ಜನಪರ ಯೋಜನೆಗಳನ್ನು ಕುರಿತು ಬೂತ್ ಮಟ್ಟದಲ್ಲಿ ಪ್ರತಿ ಮನೆ ಮನೆಗೂ ತಲುಪಿಸಲು ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಭಿಯಾನದ ಜಿಲ್ಲಾ ಸಂಚಾಲಕರಾದ ಮಲ್ಲಿಕಾರ್ಜುನ ಮಾದಮ್ಮನವರ, ರಾಷ್ಟ್ರೀಯ ಓ.ಬಿ.ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಲಕ್ಷ್ಮಣ್ ತಪಸಿ, ರಾಜ್ಯ ಮಾಧ್ಯಮ ಸಮಿತಿ ಸದಸ್ಯರಾದ ಎಫ್ ಎಸ್ ಸಿದ್ದನಗೌಡರ, ಜಿಲ್ಲಾ ಉಪಾಧ್ಯಕ್ಷರಾದ ಪ್ರಮೋದ ಕೋಚೇರಿ, ಬಸನಗೌಡ ಕೊಳದೂರ, ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಯಲ್ಲೇಶ್ ಕೋಲಕಾರ, ಮಹಾನಗರ ಮಾಧ್ಯಮ ಪ್ರಮುಖ್ ಹನುಮಂತ ಕೊಂಗಾಲಿ ಮತ್ತು ಪ್ರಮುಖ ಪದಾಧಿಕಾರಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.