ನ್ಯಾಯಾಧೀಶರ ಮುಂದೆ ಶರಣಾದ ವಿನಯ್ ಕುಲಕರ್ಣಿ - ಕೂಡಲೇ ಸಿಬಿಐ ವಶಕ್ಕೆ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ನ್ಯಾಯಾಧೀಶರ ಮುಂದೆ ಶರಣಾದ ವಿನಯ್ ಕುಲಕರ್ಣಿ - ಕೂಡಲೇ ಸಿಬಿಐ ವಶಕ್ಕೆ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಶುಕ್ರವಾರ ಕೋರ್ಟ್‌ನಲ್ಲಿ ಶರಣಾಗಿದ್ದಾರೆ. ಕೋರ್ಟ್ ಸೂಚನೆಯ ಮೇರೆಗೆ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ಮುಗಿದ ಬಳಿಕ ಪರಪ್ಪನ ಅಗ್ರಹಾರಕ್ಕೆ ವಿನಯ್ ಕುಲಕರ್ಣಿ ಮರಳಲಿದ್ದಾರೆ.

2016ರಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೆ ಜೂನ್ 6 ರಂದು ಜಾಮೀನು ರದ್ದಾಗಿತ್ತು. ಜೊತೆಗೆ ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶರಣಾಗಲು ಬಂದಿದ್ದರು. ತಕ್ಷಣವೇ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ.

Post a Comment

0Comments

Post a Comment (0)