ಬೈಲಹೊಂಗಲ : ದಿ. 18 ರಂದು ನೂತನ ಸ್ವಯಂ ಚಾಲಿತ ಚಾಲನಾ ಪಥದ ಉದ್ಘಾಟನೆ ಸಮಾರಂಭ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೈಲಹೊಂಗಲ : ದಿ. 18 ರಂದು ನೂತನ ಸ್ವಯಂ ಚಾಲಿತ ಚಾಲನಾ ಪಥದ ಉದ್ಘಾಟನೆ ಸಮಾರಂಭ

ಬೈಲಹೊಂಗಲ : ಪಟ್ಟಣದ ಹೊರವಲಯದ ದೇವಲಾಪುರ ರಸ್ತೆಯಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಸ್ವಯಂ ಚಾಲಿತ ಚಾಲನಾ ಪಥದ ಉದ್ಘಾಟನಾ ಸಮಾರಂಭ ಶುಕ್ರವಾರ ದಿ.18 ರಂದು ಬೆಳಿಗ್ಗೆ 10 ಕ್ಕೆ ಜರುಗಲಿದೆ.

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಘನ ಉಪಸ್ಥಿತಿಯಲ್ಲಿ, ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹಾಗೂ ಜಿಲ್ಲೆಯ ಸಂಸದರು, ಶಾಸಕರು, ವಿಧಾನ ಪರಿಷತ ಸದಸ್ಯರು, ಸಾರಿಗೆ ಅಧಿಕಾರಿಗಳು ಆಗಮಿಸುವರೆಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಯಾನಂದ ನರಸಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)