ಚೆನ್ನಮ್ಮನ ಕಿತ್ತೂರು ಕೋಟೆ ಆವರಣದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ. ಶಾಸಕ ಬಾಬಾಸಾಹೇಬ್ ಪಾಟೀಲ್...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಚನ್ನಮ್ಮನ ಕಿತ್ತೂರು: 
ಐತಿಹಾಸಿಕ ಕಿತ್ತೂರು ಚನ್ನಮ್ಮನ ಕೋಟೆ ಆವರಣದಲ್ಲಿ ರಾಣಿ ಚನ್ನಮ್ಮನವರ ಸಾಹಸಗಾಥೆ ಸಾರುವ ಥೀಮ್ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ರೂ. 30 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ನೀಡಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ದೂರವಾಣಿ ಮೂಲಕ ತಿಳಿಸಿದ್ದಾರೆ. ಈ ವೇಳೆ ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿ, ಕಿತ್ತೂರು ರಾಣಿ ಚನ್ನಮ್ಮನವರ ಶೌರ್ಯದ ಕಥೆಯನ್ನು ಜಗತ್ತಿಗೆ ತಿಳಿಸುವ ಈ ಥೀಮ್ ಪಾರ್ಕ್ ಕರ್ನಾಟಕದ ಗೌರವವನ್ನು ಎತ್ತಿ ಹಿಡಿಯುವ ಒಂದು ಮಹತ್ವದ ಹೆಜ್ಜೆಯಾಗಿದೆ. ಇದು ಪ್ರವಾಸಿಗರಿಗೆ ಆಕರ್ಷಣೆಯ ಕೇಂದ್ರವಾಗುವುದರ ಜೊತೆಗೆ ಕಿತ್ತೂರಿನ ಸ್ಥಳೀಯ ಜನರಿಗೆ ಉದ್ಯೋಗಾ ವಕಾಶಗಳನ್ನು ಸೃಷ್ಟಿಸಿ ಆರ್ಥಿ ಕತೆಗೂ ಉತ್ತೇಜನ ನೀಡಲಿದೆ. ಥೀಮ್ ಪಾರ್ಕ್‌ನ ಕಾಮಗಾರಿಯು ಶೀಘ್ರದಲ್ಲೇ ಆರಂಭವಾಗಲಿದ್ದು, ಒಂದು ವರ್ಷದೊಳಗೆ ಯೋಜನೆ ಯನ್ನು ಪೂರ್ಣಗೊಳಿಸುವ ಗುರಿ ಇದೆ. ಈ ಥೀಮ್ ಪಾರ್ಕ್‌ನಿಂದ ಕಿತ್ತೂರು ಕೋಟೆಯ ಐತಿಹಾಸಿಕ ಮಹತ್ವವನ್ನು ಮತ್ತಷ್ಟು ಜನರಿಗೆ ತಲುಪಿಸುವ ಜೊತೆಗೆ, ರಾಣಿ ಚನ್ನಮ್ಮನವರ ಸಾಹಸಗಾಥೆಯನ್ನು ಶಾಶ್ವತವಾಗಿ ಉಳಿಸಿಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದರು.

Post a Comment

0Comments

Post a Comment (0)