ಬೆಳಗಾವಿ ಜಿಲ್ಲೆ ಸುದ್ದಿ, ಕಿತ್ತೂರು ಕ್ರಾಂತಿ...
*ತಾ.ಪಂ ಜಿ.ಪಂ ಚುನಾವಣೆ ಎದುರಿಸಲು ಸನ್ನದ್ಧರಾಗಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಕರೆ*
ಬೆಳಗಾವಿ ನಗರದ ಬಿಜೆಪಿ ಕಚೇರಿಯಲ್ಲಿ ಸಂಘಟನಾತ್ಮಕ ಪದಾಧಿಕಾರಿಗಳ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಪಕ್ಷದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿ ಮಾತನಾಡಿ ಶೀಘ್ರದಲ್ಲೇ ತಾ.ಪಂ ಜಿ.ಪಂ ಚುನಾವಣೆ ಘೋಷಣೆಯಾಗಲಿದ್ದು ಎದುರಿಸಲು ಸನ್ನದ್ಧರಾಗಿ ಪ್ರಧಾನಿ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರದ 11 ವರ್ಷಗಳ ಸಾಧನೆಗಳು,ಜನಪರ ಯೋಜನೆಗಳು ಹಾಗೂ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಸಾಧನೆಗಳು,ಜನಪರ ಯೋಜನೆಗಳನ್ನು ಬೂತ್ ಮಟ್ಟದಲ್ಲಿ ತಲುಪಿಸಿ ಚುಣಾವಣೆಗೆ ಈಗಿನಿಂದಲೇ ತಯಾರಿ ನಡೆಸುವಂತೆ ಕರೆ ನೀಡಿದರು ಇದೇ ವೇಳೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಾಕಿ ಇರುವ ಎಲ್ಲ ಮಂಡಲ ಮಟ್ಟದ ಮೋರ್ಚಾಗಳ ಪದಾಧಿಕಾರಿಗಳನ್ನು ಆಯ್ಕೆ ಮಾಡುವಂತೆ ಸೂಚಿಸಿದರು ಈ ಸಂದರ್ಭದಲ್ಲಿ ರಾಷ್ಟ್ರೀಯ ಓ.ಬಿ.ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ್ ತಪಸಿ, ರಾಜ್ಯ ಓ.ಬಿ.ಸಿ ಮೋರ್ಚಾ ಕಾರ್ಯದರ್ಶಿ ರಾಜಕುಮಾರ ಸಗಾಯಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ,ರೇಖಾ ಚಿನ್ನಾಕಟ್ಟಿ ಹಾಗೂ ಜಿಲ್ಲೆಯ ಎಲ್ಲಾ ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು