ಬೈಲಹೊಂಗಲ ನೂತನ ಉಪವಿಭಾಗಾಧಿಕಾರಿಯಾಗಿ ಪ್ರವೀಣ ಜೈನ ಅಧಿಕಾರ ಸ್ವೀಕಾರ
ಬೈಲಹೊಂಗಲ: ಬೈಲಹೊಂಗಲ ಉಪ ವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಪ್ರವೀಣ ಜೈನ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿಕಟ ಪೂರ್ವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ ಅವರು ನೂತನ ಉಪವಿಭಾಗಾಧಿಕಾರಿಗಳಿಗೆ ಹೂಗುಚ್ಚ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
ನಿರ್ಗಮಿತ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ ಅವರು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ವರ್ಗಾವಣೆಗೊಂಡರು. ಬೆಳಗಾವಿ ನಗರಾಭೀವೃದ್ಧಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ಪ್ರವೀಣ ಜೈನ ಅವರು ಬೈಲಹೊಂಗಲ ಉಪವಿಭಾಗಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.