ರಾಜ್ಯ ಸರಕಾರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗ ಪಡೆದುಕೊಂಡು ಸಾಧನೆ ಮಾಡಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೈಲಹೊಂಗಲ : ರಾಜ್ಯ ಸರಕಾರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗ ಪಡೆದುಕೊಂಡು ಸಾಧನೆ ಮಾಡಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಹೇಳಿದರು.

ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ಕೊಠಡಿಗಳ ಉದ್ಘಾಟನೆ, 2025-26ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ ಹಾಗೂ ಎನ್‌ಎಸ್‌ಎಸ್‌ ಚಟುವಟಿಕೆಗಳ ಉದ್ಘಾಟನಾ ಹಾಗೂ ಬೈಲಹೊಂಗಲ ನಗರದ ಗುರುಭವನ ಕಟ್ಟಡದ ಅಡಿಗಲ್ಲು ಮತ್ತು ವಕ್ಕುಂದ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕೊಠಡಿಗಳ ಅಡಿಗಲ್ಲು ಸಮಾರಂಭಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಭಾವಂತ ಮಕ್ಕಳಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡುವುದು ತುಂಬ ಕಷ್ಟದ ಕೆಲಸ. ಕಷ್ಟ ಪಟ್ಟು ಅಧ್ಯಯನ ಮಾಡಿದರೆ ಯಾವುದು ಕೂಡಾ ಅಸಾಧ್ಯವಲ್ಲ. ಈ ವೀರರ ಪುಣ್ಯ ಭೂಮಿಯಲ್ಲಿ ತಾವು ಅಧ್ಯಯನ ಮಾಡುತ್ತಿರುವುದು ನಿಮ್ಮೆಲ್ಲರ ಸೌಭಾಗ್ಯ ಎಂದರು.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಪಕ್ಷದ ವರಿಷ್ಠರು ಶಿಕ್ಷಣ ಇಲಾಖೆಯ ಜವಾಬ್ದಾರಿ ನಿರ್ವಹಿಸುವುದು ತುಂಬಾ ಕಷ್ಟದ ಕೆಲಸ ಈ ಕೆಲಸವನ್ನು ನನಗೆ ನಿರ್ವಹಿಸಿದ್ದು, ಇದನ್ನು ಸವಾಲಾಗಿ ಸ್ವೀಕರಿಸಿ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದ್ದೇನೆ ಎಂದರು.
ಇಲಾಖೆಯ ವ್ಯಾಪ್ತಿಯಲ್ಲಿ 46 ಸಾವಿರ ಅನುದಾನಿತ ಶಾಲೆ, 48 ಸಾವಿರ ಸರಕಾರಿ ಪದವಿ ಪೂರ್ವದಲ್ಲಿ ಒಟ್ಟು 1 ಕೋಟಿ 8 ಲಕ್ಷ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಇಲಾಖೆಯಲ್ಲಿ ಸಾಕಷ್ಟು ನ್ಯೂನೈತಗಳಿದ್ದರು, ಅವುಗಳನ್ನು ಸರಿಪಡಿಸಿಕೊಂಡು, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುತ್ತಿದ್ದೇನೆ ಎಂದರು.

ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆವಹಿಸಿ, ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಸೌಲಭ್ಯ ಪಡೆದುಕೊಂಡು ಭವಿಷ್ಯತ್ತಿನಲ್ಲಿ ಸಾಧಕರಾಗಿ ಸಮಾಜಕ್ಕೆ ಅಮೋಘ ಕೊಡುಗೆ ನೀಡಬೇಕು. ನನ್ನ ಮತಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದೇನೆ. ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಉಪನ್ಯಾಸಕರ ಕೊರತೆ ಇದ್ದು, ಶೀಘ್ರ ಸರಕಾರದಿಂದ ಉಪನ್ಯಾಸಕರ ಕೊರತೆಯನ್ನು ನೀಗಿಸಬೇಕೆಂದು ವಿನಂತಿಸಿದರು.
ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು, ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಹಿರಿಯ ಉಪನ್ಯಾಸಕ ಬಿ.ಎಂ.ಕೊಳವಿ ಪ್ರಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಪ್ರವೀಣ ಜೈನ್, ತಹಶೀಲ್ದಾರ ಎಚ್.ಎನ್.ಶಿರಹಟ್ಟಿ, ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ, ಎಇಇ ಮಹೇಶ ಹೂಲಿ, ಬಿಇಓ ಎ.ಎನ್‌.ಪ್ಯಾಟಿ, ಪುರಸಭೆ ಅಧ್ಯಕ್ಷ ವಿಜಯ ಬೋಳನ್ನವರ, ತಾ.ಪಂ.ಇಓ ಸಂಜೀವ ಜುನ್ನೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಬೀಯಾ ಯಕ್ಕುಂಡಿ ಸ್ವಾಗತಿಸಿದರು. ಕಾವೇರಿ ಭಜಂತ್ರಿ ನಿರೂಪಿಸಿದರು. ಪ್ರೀಯಾ ಹಿರೇಮಠ ವಂದಿಸಿದರು.

Post a Comment

0Comments

Post a Comment (0)