ಲಾಲ್ ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ: ಈ ಬಾರಿ ಚೆನ್ನಮ್ಮ, ರಾಯಣ್ಣ ದರ್ಶನLalbagh Flower Show 2025

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಲಾಲ್ ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ: ಈ ಬಾರಿ ಚೆನ್ನಮ್ಮ, ರಾಯಣ್ಣ ದರ್ಶನ
Lalbagh Flower Show 2025: ಬೆಂಗಳೂರಿನ ಸಸ್ಯಕಾಶಿ ಲಾಲಬಾಗ್ನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಸಿದ್ದತೆ ನಡೆಸಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದ ವಿಷಯವಸ್ತು ಏನು? ಫಲಪುಷ್ಪ ಪ್ರದರ್ಶನ ಯಾವಾಗಿನಿಂದ ಆರಂಭ? ಎಷ್ಟು ದಿನ ನಡೆಯುತ್ತದೆ? ಟಿಕೆಟ್ ದರ ಎಲ್ಲ ಮಾಹಿತಿ ಇಲ್ಲಿದೆ.
ಬೆಂಗಳೂರು, (ಜುಲೈ 15): ಸ್ವಾತಂತ್ರ್ಯೋತ್ಸವ (Independence Day) ಮತ್ತು ಗಣರಾಜ್ಯೋತ್ಸವ ಅಂಗವಾಗಿ ಪ್ರತಿ ವರ್ಷ ಒಂದೊಂದು ರೀತಿಯ ವಿಷಯವಸ್ತುವಿನ ಆಧಾರದಲ್ಲಿ ತೋಟಗಾರಿಕೆ ಇಲಾಖೆ ಬೆಂಗಳೂರಿನ (Bengaluru) ಸಸ್ಯಕಾಶಿ ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ (Lalbagh Flower Show) ಆಯೋಜಿಸುತ್ತದೆ. ಅದರಂತೆ, ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪ್ರತಿವರ್ಷದಂತೆ ಈ ವರ್ಷವೂ ಸಹ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಸಿದ್ದತೆ ನಡೆಸಿದ್ದು, ಇದೇ ಆಗಸ್ಟ್ 7ರಿಂದ ಆಗಸ್ಟ್ 18ರ ವರೆಗೆ ಹಮ್ಮಿಕೊಳ್ಳಲಾಗಿದೆ. ಈ ಬಾರಿ 218ನೇ ಫ್ಲವರ್ ಶೋನಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ (Rani Chennamma) ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (Sangolli Rayanna) ವಿಷಯಾಧಾರಿತ ಪ್ರದರ್ಶನವಿರಲಿದೆ.

Post a Comment

0Comments

Post a Comment (0)