ಸಾಹಿತಿ . ಎಸ್. ಎಲ್ ಭೈರಪ್ಪ ಅವರ ನಿಧನಕ್ಕೆ ಸಂಸದ ಜಗದೀಶ ಶೆಟ್ಟರ ಸಂತಾಪ
ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಮಹಾನ್ ಸಾಹಿತಿಗಳು, ಸರಸ್ವತಿ ಪುತ್ರರು, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಡಾ. ಎಸ್. ಎಲ್ ಭೈರಪ್ಪ ಅವರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಅವರ ಅಗಲುವಿಕೆಯಿಂದ ಸಾಹಿತ್ಯ ಲೋಕಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಸಂಸದರಾದ ಶ್ರೀ ಜಗದೀಶ ಶೆಟ್ಟರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ದಾಟು, ಭಿತ್ತಿ, ಗೃಹಭಂಗ, ಪರ್ವ, ನಾಯಿ ನೆರಳು, ಉತ್ತರಕಾಂಡ, ದೂರ ಸರಿದವರು, ವಂಶವೃಕ್ಷ ಹೀಗೆ ಹಲವು ಕಾದಂಬರಿಗಳ ಮೂಲಕ ಓದುಗರ ಮನಸ್ಸಿನಲ್ಲಿ ಹಾಗೂ ಸಾಹಿತ್ಯ ಲೋಕದಲ್ಲಿ ಅವರು ಎಂದಿಗೂ ಅಜರಾಮರವಾಗಿ ಉಳಿಯುತ್ತಾರೆ.
ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ, ಕುಟುಂಬ ವರ್ಗದವರಿಗೆ ಅವರ ಅಗಲುವಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.