ಬೆಳೆ ನಷ್ಟ ಪರಿಹಾರ ಹೆಚ್ಚಿಸಲು ನಿರ್ಧರಿಸಿದ ಸರಕಾರ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
#ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡ ರೈತರಿಗೆ ನೀಡುವ ಪರಿಹಾರ ಮೊತ್ತವನ್ನು ಹೆಚ್ಚಿಸಲು ಮುಂದಾಗಿದೆ ರಾಜ್ಯ ಸರ್ಕಾರ. 

#ಮಳೆ ಹಾನಿಯಿಂದ 5.20 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯ ಅಂದಾಜು, ರೈತರಿಗೆ ಹೆಚ್ಚಿನ ಪರಿಹಾರ ನೀಡಲು ಸಂಪುಟದಲ್ಲಿ ಚರ್ಚೆ.

#ಕೇಂದ್ರ ಸರ್ಕಾರದ ಅನಾವೃಷ್ಟಿ ಪರಿಹಾರವನ್ನು ಇನ್ನೂ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆ
ರೈತರಿಗೆ ನೀಡುವ ಹೆಚ್ಚುವರಿ ನಷ್ಟ ಪರಿಹಾರವನ್ನು ತಾನೇ ಭರಿಸಲು ಮುಂದಾದ ಸರ್ಕಾರ.

ಬೆಂಗಳೂರು: ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ಮೊತ್ತ ಹೆಚ್ಚಳಕ್ಕೆ ಸರಕಾರ ಮುಂದಾಗಿದೆ. ರಾಜ್ಯದಲ್ಲಿ ಅಂದಾಜು 5.20 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಷ್ಟವನ್ನು ಅಂದಾಜು ಮಾಡಲಾಗಿದ್ದು, ಎಸ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ನೀಡುವ ಪರಿಹಾರ ಏನೇನೂ ಸಾಲದು ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಸುಮಾರು 5 ವರ್ಷಗಳ ಬಳಿಕ ಬೆಳೆ ನಷ್ಟ ಪರಿಹಾರ ಪರಿಷ್ಕರಣೆಗೆ ಸರಕಾರ ಬಯಸಿದೆ. ಈ ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಮೊತ್ತ ಹೆಚ್ಚಳ ಮಾಡಲಾಗಿತ್ತು.
ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಹೆಚ್ಚಿಸಲು ರಾಜ್ಯ ಸರಕಾರ ಮುಂದಾಗಿದೆ. ಸುಮಾರು 5.20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಎಸ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ನೀಡುವ ಪರಿಹಾರ ಸಾಲದು ಎಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ. ಜಂಟಿ ಸಮೀಕ್ಷೆ ಬಳಿಕ ಪರಿಹಾರ ಮೊತ್ತವನ್ನು ಪರಿಷ್ಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Post a Comment

0Comments

Post a Comment (0)