ಚೆನ್ನಮ್ಮನ ಕಿತ್ತೂರು ಉತ್ಸವ 2025... ಅದ್ದೂರಿಯಾಗಿ ಚಾಲನೆ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಚನ್ನಮ್ಮನ ಕಿತ್ತೂರು: ಇಲ್ಲಿ ಮೂರು ದಿನ ನಡೆಯಲಿರುವ

ಕಿತ್ತೂರು ಉತ್ಸವದ ಪ್ರಯುಕ್ತ ಗುರುವಾರ ಆಯೋಜಿಸಿದ್ದ ಜಾನಪದ ಕಲಾವಾಹಿನಿ ಮೆರವಣಿಗೆಗೆ ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ ಚಾಲನೆ ನೀಡಿದರು.
ರಾಣಿ ಚನ್ನಮ್ಮ ವೃತ್ತದಲ್ಲಿ ಇರುವ ಚನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಶಾಸಕರಾದ ಬಾಬಾಸಾಹೇಬ ಪಾಟೀಲ, ಮಹಾಂತೇಶ ಕೌಜಲಗಿ, ವಿಶ್ವಾಸ ವೈದ್ಯ, ಆಸಿಫ್ ಸೇರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿ.ಪಂ ಸಿಇಒ ರಾಹುಲ್ ಶಿಂಧೆ, ಎಸ್ಪಿ ಡಾ.ಭೀಮಾಶಂಕರ ಗುಳೇದ ಇತರರಿದ್ದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ, ಕಿತ್ತೂರಿಗೆ ಆಗಮಿಸಿದ ವೀರಜ್ಯೋತಿಯನ್ನು ಇದೇವೇಳೆ ಗಣ್ಯರು ಬರಮಾಡಿಕೊಂಡರು.

Post a Comment

0Comments

Post a Comment (0)