ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ಭಕ್ತಿ ಭಾವದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ ಆಚರಣೆ :ಸಂಸದ ಜಗದೀಶ ಶೆಟ್ಟರ್
ಕಿತ್ತೂರು ರಾಣಿ ಚೆನ್ನಮ್ಮನವರ 247ನೇ ಜಯಂತ್ಯೋತ್ಸವ ಮತ್ತು 201ನೇ ವಿಜಯೋತ್ಸವ ಸಂಭ್ರಮಾಚರಣೆ ಅಂಗವಾಗಿ ಇಂದು ನವದೆಹಲಿಯ ಸಂಸತ್ ಭವನದ ಆವರಣದ ಪ್ರೇರಣಾ ಸ್ಥಳದಲ್ಲಿ ಕನ್ನಡನಾಡಿನ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಪರಮಪೂಜ್ಯರಾದ ಶ್ರೀ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳವರು ಹಾಗೂ ಹರಿಹರ ಪಂಚಮಸಾಲಿ ಪೀಠದ ಪರಮಪೂಜ್ಯ ಶ್ರೀ ಶ್ರೀ ವಚನಾನಂದ ಸ್ವಾಮೀಜಿಗಳವರು ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ, ರಾಜ್ಯಸಭಾ ಸಂಸದರು ಹಾಗೂ ಸಮಾಜ ಸೇವಕರಾದ ಶ್ರೀಮತಿ ಸುಧಾಮೂರ್ತಿ ಸೇರಿದಂತೆ ಇನ್ನಿತರೆ ಗಣ್ಯಮಾನ್ಯರು ಹಾಗೂ ಸಮಾಜದ ಮುಖಂಡರು, ದೆಹಲಿ ಕನ್ನಡಿಗರು ಉಪಸ್ಥಿತರಿದ್ದರು ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಸಂಸದರಾದ ಜಗದೀಶ ಶೆಟ್ಟರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.