ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಕುತೂಹಲ ಘಟ್ಟ ತಲುಪಿದ್ದು ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಏಳು ಕ್ಷೇತ್ರಗಳ ಅಭ್ಯರ್ಥಿಗಳು ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದರು.
ಗುರುವಾರ ನಗರದ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಗೆ ಆಗಮಿಸಿ ಏಳು ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಲಾಯಿತು. ನಿಪ್ಪಾಣಿ, ರಾಯಬಾಗ, ಯರಗಟ್ಟಿ, ಸವದತ್ತಿ, ಬೈಲಹೊಂಗಲ, ಕಿತ್ತೂರು, ಖಾನಾಪುರ ಕ್ಷೇತ್ರದಿಂದ ಅಭ್ಯರ್ಥಿಗಳು ಕಣಕ್ಕಿಳಿದಿದ್ದು ಬರುವ ಶನಿವಾರ ಇನ್ನುಳಿದ ಕ್ಷೇತ್ರಕ್ಕೆ ಜಾರಕಿಹೊಳಿ ಬಣದಿಂದ ನಾಮಪತ್ರ ಸಲ್ಲಿಕೆಯಾಗಲಿವೆ.
ನಾಮಪತ್ರ ಸಲ್ಲಿಸಿ ಮಾತನಾಡಿ ಬಾಲಚಂದ್ರ ಜಾರಕಿಹೊಳಿ.
ಡಿಸಿಸಿ ಬ್ಯಾಂಕ್ ಚುನಾವಣೆಯನ್ನು ನಮ್ಮದೇ ಆದ ಬೆಂಬಲಿತ ಅಭ್ಯರ್ಥಿಗಳು ಗುಂಪು ಒಟ್ಟುಗೂಡಿ ಚುನಾವಣೆ ಎದುರಿಸುತ್ತೇವೆ. ಇಲ್ಲಿ ಪಕ್ಷಾತೀತವಾಗಿ ಎಲ್ಲಾ ಮುಖಂಡರು ಸೇರಿ ಚುನಾವಣೆ ಗೆಲ್ಲುವ ಮೂಲಕ ನಮ್ಮದೇ ಅಭ್ಯರ್ಥಿ ಅಧ್ಯಕ್ಷ ಹುದ್ದೆ ಅಲಂಕರಿಸುವ ವಿಶ್ವಾಸ ಇದೇ ಎಂದರು.
ಈಗಾಗಲೇ ಏಳು ಕ್ಷೇತ್ರದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು ನಮ್ಮ ಪರವಾಗಿ ಹದಿಮೂರು ಕ್ಷೇತ್ರದಿಂದ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ. ಇನ್ನುಳಿದಂತೆ ಅಥಣಿ, ಕಾಗವಾಡ ಹಾಗೂ ಚಿಕ್ಕೋಡಿ ಕ್ಷೇತದಿಂದ ನಮ್ಮ ಬಣದಿಂದ ಯಾವುದೇ ಅಭ್ಯರ್ಥಿ ಕಣಕ್ಕೆ ಇಳಿಸುವುದಿಲ್ಲ ಎಂದು ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಶಾಸಕ ವಿಶ್ವಾಸ್ ವೈದ್ಯ, ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಮಾಜಿ ಸಾಸಕ ಮಹಾಂತೇಶ್ ದೊಡ್ಡಗೌಡರ್, ಅರವಿಂದ ಪಾಟೀಲ, ಮುಖಂಡರಾದ ವಿರೂಪಾಕ್ಷ ಮಾಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.