RSS ಪಥಸಂಚಲನ, ಚಟುವಟಿಕೆಗಳನ್ನು ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
RSS ಪಥಸಂಚಲನ, ಚಟುವಟಿಕೆಗಳನ್ನು ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆ... 

ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ರಾಜ್ಯದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಗುರಿಯಾಗಿಸಿಕೊಂಡು ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಖಾಸಗಿ ಸಂಸ್ಥೆಗಳು ಸರ್ಕಾರಿ ಆವರಣದಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ತಡೆ ನೀಡಿದೆ. 

ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಸಂವಿಧಾನವು 19(1)(A) ಮತ್ತು (B) ವಿಧಿಯ ಅಡಿಯಲ್ಲಿ ನೀಡಿರುವ ಹಕ್ಕುಗಳನ್ನು ಸರ್ಕಾರ ಕಸಿದುಕೊಳ್ಳಲು ಸಾಧ್ಯವಿಲ್ಲ. 
ಖಾಸಗಿ ಸಂಘಟನೆಗಳನ್ನು ನಿರ್ಬಂಧಿಸುವುದು ಸಂವಿಧಾನದ 32 ನೇ ವಿಧಿ ಉಲ್ಲಂಘನೆಯಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಸರ್ಕಾರದ ನಿರ್ದೇಶನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ, ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿದೆ.

Post a Comment

0Comments

Post a Comment (0)