ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಇಡೀ ರಾಜ್ಯದ ಗಮನ ಸೆಳೆದಿತ್ತು. ಚುನಾವಣೆ ಮುಗಿದು ಫಲಿತಾಂಶ ಕೂಡ‌ ಪ್ರಕಟ ಆಗಿದ್ದು, ಇಂದು ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆಗೆ ನಡೆಯುತ್ತಿದೆ. ಯಾರು ಡಿಸಿಸಿ ಬ್ಯಾಂಕ್ ಗಾದಿಗೆ ಏರಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿತ್ತು, ಆದರೆ ಈ ಬಾರಿ ಹೊಸ ಅಭ್ಯರ್ಥಿಗೆ ಮಣೆ:ಈ ಬಾರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಗಾದಿಗೆ ಹೊಸಬರಿಗೆ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ. ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ, ಮಾಜಿ ಅಧ್ಯಕ್ಷ ಅಪ್ಪಾಸಾಹೇಬ ಕುಲಗೂಡೆ ಅಧ್ಯಕ್ಷ ಸ್ಥಾನದ ರೇಸ್ನಲ್ಲಿದ್ದಾರೆ. ಅಚ್ಚರಿ ಎಂಬಂತೆ ಗಣೇಶ ಹುಕ್ಕೇರಿ, ರಾಜು ಕಾಗೆ ಹೆಸರು ಕೂಡ ಕೇಳಿ ಬರುತ್ತಿದೆ. ಅಂತಿಮವಾಗಿ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಅಧಿಕೃತವಾಗಿ ಆಯ್ಕೆ ಆಗಿದ್ದಾರೆ.

Post a Comment

0Comments

Post a Comment (0)