ಬೆಳಗಾವಿ ಜಿಲ್ಲೆ ಅಖಂಡವಾಗಿ ಉಳಿಯಬೇಕು, ವಿಭಜನೆಯಾದರೆ ಉಪ ವಿಭಾಗವಾಗಿರುವ ಬೈಲಹೊಂಗಲ ತಾಲೂಕು ಜಿಲ್ಲೆ ಆಗಲೇ ಬೇಕು, ಜಿಲ್ಲಾ ಹೋರಾಟ ಸಮಿತಿ, ಪೂಜ್ಯರೊಂದಿಗೆ ಮುಖ್ಯಮಂತ್ರಿಗಳಿಗೆ ನಿಯೋಗ ಭೇಟಿ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿಯ ಸರ್ವ ಸದಸ್ಯರು ಹಾಗೂ ಪರಮ ಪೂಜ್ಯರುಗಳ ನಿಯೋಗದೊಂದಿಗೆ  ಬೆಳಗಾವಿಯ ಸುವರ್ಣಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಅವರಿಗೆ ಬೆಳಗಾವಿ ಜಿಲ್ಲೆ ಅಖಂಡವಾಗಿ ಉಳಿಯಬೇಕು,  ಒಂದು ವೇಳೆ ವಿಭಜನೆಯಾದರೆ ಉಪ ವಿಭಾಗವಾಗಿರುವ ಬೈಲಹೊಂಗಲ ತಾಲೂಕುವನ್ನು ಜಿಲ್ಲೆಯಾಗಿ ಮಾಡಬೇಕೆಂದು ವಿನಂತಿಸಲಾಯಿತು.
 ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಸರ್ಕಾರದ ಮುಖ್ಯ ಸಚೇತಕರು ಶ್ರೀ ಅಶೋಕ್ ಪಟ್ಟಣ, ಕಿತ್ತೂರು ಮತ ಕ್ಷೇತ್ರದ ಶಾಸಕರಾದ ಶ್ರೀ ಬಾಬಾಸಾಹೇಬ ಪಾಟೀಲ, ಮಾಜಿ ಶಾಸಕರುಗಳು, ಎಲ್ಲ ಚುನಾಯಿತ ಪ್ರತಿನಿಧಿಗಳು, ಹೋರಾಟ ಸಮಿತಿಯ ಎಲ್ಲ ಪದಾಧಿಕಾರಿಗಳು, ಗುರು ಹಿರಿಯರು ಉಪಸ್ಥಿತರಿದ್ದರು.

Post a Comment

0Comments

Post a Comment (0)