ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಶ್ರೀ ಅಂಬಾಮಠದಲ್ಲಿ ಆಯೋಜಿಸಿದ್ದ ಶ್ರೀ ಅಂಬಾ ಮಹೋತ್ಸವ -2026 ಹಾಗೂ ಸಿಂಧನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಶ್ರೀ ಅಂಬಾಮಠದಲ್ಲಿ ಆಯೋಜಿಸಿದ್ದ ಶ್ರೀ ಅಂಬಾ ಮಹೋತ್ಸವ -2026 ಹಾಗೂ ಸಿಂಧನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮ...
ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಅಂಬಾ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದ್ದು, ತಾಯಿಯ ದರ್ಶನವಾಗಿದ್ದು ನನ್ನ ಪುಣ್ಯ. ಇಂದು ಈ ಕ್ಷೇತ್ರದಲ್ಲಿ ಸಾಲಗುಂದಾ ಏತನೀರಾವರಿ, ಮುಳ್ಳೂರು ಏತ ನೀರಾವರಿ ಮತ್ತು ವಳಬಳ್ಳಾರಿ ವಿಯರ್ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.

ನಾವು ಅಧಿಕಾರಕ್ಕೆ ಬಂದ ಮೇಲೆ ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಎಲ್ಲಾ ನಿಗಮಗಳಡಿ ₹176 ಕೋಟಿಗಳನ್ನು ಒದಗಿಸಲಾಗಿದೆ. ಸಾಲಗುಂದಾ ಏತ ನೀರಾವರಿಗೆ ₹71 ಕೋಟಿ, ಮಳ್ಳೂರುಏತ ನೀರಾವರಿಗೆ ₹21 ಕೋಟಿ, ಒಳಬಳ್ಳಾರಿ ಏತ ನೀರಾವರಿಗೆ ₹43 ಕೋಟಿಗೂ ಹೆಚ್ಚು ಅನುದಾನವನ್ನು ಒದಗಿಸಲಾಗಿದೆ. ಹಂಪನಗೌಡ ಬಾದರ್ಲಿ ಅವರು ಈ ಕ್ಷೇತ್ರದ ಅಭಿವೃದ್ಧಿಯನ್ನು ಉತ್ತಮವಾಗಿ ಮಾಡುತ್ತಿದ್ದಾರೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನೀರು ಒದಗಿಸುವ ಪ್ರಯತ್ನದಲ್ಲಿ 30 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಲಾಗಿದೆ. ಉಳಿದ 12 ಲಕ್ಷ ಪ್ರದೇಶಕ್ಕೆ ನೀರು ಒದಗಿಸುವ ಕಾರ್ಯ ವಿವಿಧ ಹಂತಗಳಲ್ಲಿದೆ. 

₹431 ಕೋಟಿ ವೆಚ್ಚದಲ್ಲಿ ಪಾಪಯ್ಯ ಟನಲ್ ಮತ್ತು ಕಾಲುವೆ ಅಭಿವೃದ್ಧಿಗೆ ಹಾಗೂ ತುಂಗಭದ್ರಾ 33 ಗೇಟ್ ಗಳನ್ನು ಅಳವಡಿಸುವ ಕೆಲಸ ಮಾಡಲಾಗುತ್ತಿದೆ. ಜೂನ್ ಒಳಗೆ ಈ ಕೆಲಸವನ್ನು ಪೂರ್ಣಗೊಳಿಸಿ ಮುಂದಿನ ಮುಂಗಾರು ಬೆಳೆಗೆ ನೀರು ಒದಗಿಸಲಾಗುವುದು. ಎಷ್ಟೇ ವೆಚ್ಚವಾದರೂ ಹೊಸ ಗೇಟ್ ಗಳನ್ನು ಅಳವಡಿಸಿ ನೀರು ಒದಗಿಸುತ್ತೇವೆ.

Post a Comment

0Comments

Post a Comment (0)