ಡಾ. ಪ್ರಭಾಕರ ಕೋರೆಯವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿರುವುದು ಅತ್ಯಂತ ಸಂತಸದ ಸಂಗತಿ : ಸಂಸದ ಜಗದೀಶ ಶೆಟ್ಟರ್

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಡಾ. ಪ್ರಭಾಕರ ಕೋರೆಯವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿರುವುದು ಅತ್ಯಂತ ಸಂತಸದ ಸಂಗತಿ : ಸಂಸದ ಜಗದೀಶ ಶೆಟ್ಟರ್

ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರು ಹಾಗೂ ರಾಜ್ಯಸಭೆಯ ಮಾಜಿ ಸದಸ್ಯರಾದ ಡಾ.ಪ್ರಭಾಕರ ಕೋರೆ ಅವರಿಗೆ ಈ ಸಲದ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿರುವುದು ಅತ್ಯಂತ ಸಂತಸದ ಸಂಗತಿ. 

ಶಿಕ್ಷಣ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಕೆಎಲ್ಇ ಸಂಸ್ಥೆಗೆ ಅಪಾರ ಕೊಡುಗೆ ನೀಡಿದ್ದಾರೆ. 

ವೈದ್ಯಕೀಯ ಕ್ಷೇತ್ರದಲ್ಲಿಯೂ ಸಹ ಕೆಎಲ್ಇ ಸಂಸ್ಥೆಯು ಹೆಸರುವಾಸಿಯಾಗುವಂತೆ ಮಾಡುವಲ್ಲಿ ಇವರ ಪಾತ್ರ ಅತ್ಯಂತ ಮಹತ್ವದ್ದು. ಇವರು ಶಿಕ್ಷಣಕ್ಕೆ ನೀಡಿದ ಸೇವೆಯನ್ನು ಮನಗಂಡು 2026 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ನೀಡುತ್ತಿರುವುದು ನಮಗೆಲ್ಲ ಹೆಮ್ಮೆಯ ವಿಷಯ.

ಇವರೊಂದಿಗೆ ಕಲಾ ಕ್ಷೇತ್ರದಲ್ಲಿನ ಸೇವೆಗಾಗಿ ಶತಾವಧಾನಿ ಡಾ. ಆರ್. ಗಣೇಶ್ ಅವರು ಪದ್ಮ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ಶ್ರೀ ಶಶಿ ಶೇಖರ್‌ ವೆಂಪತಿ, ವೈದ್ಯಕೀಯ ಕ್ಷೇತ್ರದಲ್ಲಿನ ಸಾಧನೆಗಾಗಿ ಡಾ. ಸುರೇಶ್‌ ಹನಗವಾಡಿ, ಸಮಾಜ ಸೇವಾ ಕ್ಷೇತ್ರದಲ್ಲಿನ ಸಾಧನೆಗಾಗಿ ಡಾ. ಎಸ್‌. ಜಿ. ಸುಶೀಲಮ್ಮ ಮತ್ತು ಶ್ರೀ ಅಂಕೇಗೌಡ, ವಿಜ್ಞಾನ ಮತ್ತು ಇಂಜಿನಿಯರಿಂಗ್‌ ಕ್ಷೇತ್ರದಲ್ಲಿನ ಸಾಧನೆಗಾಗಿ ಕು. ಶುಭಾ ವೆಂಕಟೇಶ್‌ ಅಯ್ಯಂಗಾರ್‌ ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದು, ವ್ಯಾಪಾರ ಮತ್ತು ಉದ್ಯಮ ಕ್ಷೇತ್ರದಲ್ಲಿನ ಸಾಧನೆಗಾಗಿ ಶ್ರೀ ಟಿ. ಟಿ. ಜಗನ್ನಾಥನ್‌ ಅವರು ಮರಣೋತ್ತರ ಪ್ರದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿರುವುದು ಹೆಮ್ಮೆಯ ಸಂಗತಿ, ಎಲ್ಲ ಸಾಧಕರಿಗೂ ಹೃತ್ಪೂರ್ವಕ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಲೋಕಸಭಾ ಸಂಸದರಾದ ಶ್ರೀ ಜಗದೀಶ ಶೆಟ್ಟರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)