ಕೀರ್ತಿ ಪಡೆದ ವೀರವನಿತೆ ಬೆಳವಡಿ ಮಲ್ಲಮ್ಮನ ಉತ್ಸವ 2026ಕ್ಕೆ ಸರ್ಕಾರ ₹75 ಲಕ್ಷ ಮಂಜೂರು ಮಾಡಿದ್ದು, ಫೆ.28, ಮಾ.1 ರಂದು ಎರಡು ದಿನಗಳ ಕಾಲ ಬೆಳವಡಿ ಗ್ರಾಮದಲ್ಲಿ ನಿರ್ಮಿಸಿದ ಭವ್ಯ ವೀರರಾಣಿ ಬೆಳವಡಿ ಮಲ್ಲಮ್ಮನ ವೇದಿಕೆಯಲ್ಲಿ ವಿಧ್ಯುಕ್ತವಾಗಿ ಪ್ರಾರಂಭವಾಗಲಿದ್ದು, ಕ್ಷಣಗಣನೆ ಆರಂಭವಾಗಿದೆ.
ಎರಡು ಎಕರೆ ಜಮೀನಿನಲ್ಲಿ ತೆರೆದ ಭವ್ಯವಾದ ಪೆಂಡಾಲ ನಿರ್ಮಾಣವಾಗಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಸಾರ್ವ-ಜನಿಕರಿಗೆ, ವಿದ್ಯಾರ್ಥಿನಿಯರಿಗೆ ಮಲ್ಲಮ್ಮ ಚರಿತ್ರೆ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗುತ್ತಿದ್ದು, ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲಿ-ದ್ದಾರೆ. ರಾಷ್ಟ್ರ, ರಾಜ್ಯ ಮಟ್ಟದ ಮಹಿಳಾ, ಪುರುಷ ಜಂಗೀ ನಿಕಾಲಿ ಕುಸ್ತಿಗಳಿಗೆ ಕುಸ್ತಿ ಅಖಾಡ ಸಜ್ಜಾಗಿದೆ. 10 ವಸ್ತು ಪ್ರದರ್ಶನ ನ ಮಳಿಗೆಗಳು, ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮ-ನಡೆಯಲಿವೆ.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಯೋಗದಲ್ಲಿ ಉತ್ಸವ-ಜರುಗಲಿದ್ದು, ಫೆ.28ರಂದು ಬೆಳಗ್ಗೆ 10ಕ್ಕೆ ಮಲ್ಲಮ್ಮ ವೃತ್ತದಲ್ಲಿ ಬೆಳವಡಿ ಮಲ್ಲಮ್ಮನ ವಿಜಯ ಜ್ಯೋತಿ ಬರಮಾಡಿಕೊಳ್ಳುವುದು.
ಶಾಸಕ ಮಹಾಂತೇಶ ಕೌಜಲಗಿ ಸಂಸ್ಥಾನದ ಧ್ವಜಾರೋಹಣ ನೆರವೇರಿಸಿ, ವಸ್ತು ಪ್ರದರ್ಶನ ಉದ್ಘಾಟಿಸು ವರು. ಬೆಳಗ್ಗೆ 10.30ಕ್ಕೆ ಶಾಸಕ ಬಾಬಾಸಾಹೇಬ ಪಾಟೀಲ ಜಾನಪದ ಕಲಾವಾಹಿನಿ ಉದ್ಘಾಟಿಸುವರು. ಸಂಜೆ 7ಕ್ಕೆ ವೀರರಾಣಿ ಬೆಳವಡಿ ಮಲ್ಲಮ್ಮ ವೇದಿಕೆಯಲ್ಲಿ ಹೂಲಿ ಹಿರೇಮಠದ ರಾಜಗುರು ಸಂಸ್ಥಾನದ ಶಿವಮಹಾಂತ ಶಿವಾಚಾರ್ಯ ಸ್ವಾಮೀಜಿ, ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಮಹಾಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರ ವಚನಾನಂದ ಸ್ವಾಮೀಜಿ ಸಾನ್ನಿಧ್ಯವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉತ್ಸವ ಉದ್ಘಾಟಿಸುವರು.
ರಾಣಿ ಮಲ್ಲಮ್ಮಮಹಿಳಾ ಪ್ರತಿಷ್ಠಾನ ಪ್ರಧಾನ ಕಾರ್ಯದರ್ಶಿ ಸವಿತಾ ಪಾಟೀಲ ಅವರಿಗೆ ವೀರರಾಣಿ ಮಲ್ಲಮ್ಮ ಪ್ರಶಸ್ತಿ ಪ್ರದಾನ ನಡೆಯಲಿದೆ.